ಸಾಮಾಜಿಕ ಕ್ರಾಂತಿಯ ಹರಿಕಾರ ನಾರಾಯಣಗುರು

ತುಮಕೂರು : ಜಾತಿ ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣಗುರು ಎಂಬ ಸಾಮಾಜಿಕ ಗುರು ಉದಯಿಸಿ ಸಾಮಾಜಿಕ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್ ಸಿದ್ದಲಿಂಗಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘದ ಸಂಯುಕ್ತಾಶ್ರಯದಲ್ಲಿಂದು ಕನ್ನಡ ಮತ್ತು ಸಂಸ್ಕೃತಿ ಕಚೇರಿಯಲ್ಲಿ ನಡೆದ ಶ್ರೀ ನಾರಾಯಣಗುರು ಜಯಂತಿಯಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ದಲಿತ ಜನರಿಗೆ ದೇವಾಲಯ ಪ್ರವೇಶ ನಿರಾಕರಿಸಿದ್ದನ್ನು ನಾರಾಯಣಗುರು ಅವರು ವಿರೋಧಿಸುತ್ತಾರೆ. ತಾವೇ ಸುಮಾರು 64 ದೇವಾಲಯಗಳನ್ನು ನಿರ್ಮಿಸಿ ಶೋಷಿತರಿಗೆ ಮುಕ್ತ ಪ್ರವೇಶ ನೀಡುತ್ತಾರೆಂದು ಅವರು ಸ್ಮರಿಸಿದರು.

ಕರ್ನಾಟಕದಲ್ಲಿ ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಹಾಗೇ, ತಮಿಳುನಾಡಿನ ಪೇರಿಯಾರ್ ಅವರ ವಿಚಾರಧಾರೆ ಸಾಮಾಜಿಕ ಬದಲಾವಣೆಗೆ ಕಾರಣವಾಯಿತೋ ಅಂತೆಯೇ ಕೇರಳದ ನಾರಾಯಣಗುರು ಶೋಷಣೆಗೆ ಒಳಗಾದವರ ಪರ ಕ್ರಾಂತಿಯನ್ನೆ ನಡೆಸಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಜಿ.ವಿ ಮೋಹನ್ ಕುಮಾರ್, ಪಾಲಿಕೆ ಸದಸ್ಯ ಧನಿಯಾಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ಡಿ.ಎಂ ರವಿಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಕೆ.ವಿ ಅಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಲ್ಲಸಂದ್ರ, ವೆಂಕಟಸ್ವಾಮಿ ಜಗದ್ಗುರು ಶ್ರೀ ನಾರಾಯಣಗುರು ಸಮಾಜ ಸೇವಾ ಟ್ರಸ್ಟ್‌ ನ ಪದಾಧಿಕಾರಿಗಳಾದ ಮಾಧವನ್, ರಾಜೇಶ್, ರಾಜನ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳಾದ ಬಿ.ಆರ್ ರಾಜೇಗೌಡ, ರಾಜೇಶ್ ದರ್ಶನ್ ಅವರು ಹಾಜರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!