ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು

ತುಮಕೂರು: ಅತಿವೇಗ ಅಜಾಗರೂಕತೆಯಿಂದ ಬಂದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ತುಮಕೂರು ನಗರದ ಸಿ.ಎಂ. ಬಡಾವಣೆ 7 ನೇ ಕ್ರಾಸ್ ನ ಸಿ.ವೀರನಾಗಪ್ಪ (72) ಎಂದು ಗುರುತಿಸಲಾಗಿದೆ.
ಕ್ಯಾತ್ಸಂದ್ರ ಪೊಲೀಸ್ ಠಾಣೆ ಮುಂಭಾಗದ ಹೆಚ್.ಬಿ.ಪೆಟ್ರೋಲ್ ಬಂಕ್ ಸಮೀಪ ಈ ದುರ್ಘಟನೆ ನಡೆದಿದ್ದು, ಅತಿವೇಗ ಅಜಾಗರೂಕತೆಯಿಂದ ಬಂದ ಹುಂಡೈ ಕಾರು ಟಿವಿಎಸ್ ಮೊಪೆಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೆಷೆನ್ ಕೋರ್ಟ್ ನಲ್ಲಿ ಎಫ್ ಡಿಸಿಯಾಗಿ ನಿವೃತ್ತರಾಗಿದ್ದ ಸಿ. ವೀರನಾಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!