ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ

ಬಾದಾಮಿ: ನವಿಲು ತೀರ್ಥ ಜಲಾಶಯದಿಂದ 12,500 ಕ್ಯೂಸೆ ಕ್ಸ್ ನೀರು ಬಿಡುಗಡೆ ಮಾಡಿದ್ದು ಬಾದಾಮಿ ತಾಲೂಕಿನ ನದಿ ತಟದ ಗ್ರಾಮದ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಲು ವಿಪಕ್ಷ ನಾಯಕ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯ ನವರು ಸೂಚಿಸಿದ್ದಾರೆ.

ಮಲಪ್ರಭಾ ನದಿ ತೀರದ ಜನತೆಗೆ ತಿಳಿಯ ಪಡಿಸುವುದೇನೆಂದರೆ
ಇಂದು ದಿನಾಂಕ 12-.09.2022 ರಂದು ನವಿಲುತೀರ್ಥ ಜಲಾಶಯದಿಂದ 12.500 ಸಾವಿರ‌ ಕ್ಯುಸೆಕ್ ನೀರು ಬಿಡುಗಡೆ ಮಾಡಿರುವದರಿಂದ ಮಲಪ್ರಭಾ ನದಿ ದಡದ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು. ಆದ್ದರಿಂದ ಗ್ರಾಮಸ್ಥರು,
ಜನ,ಜಾನುವಾರುಗಳು,ಇತರ ಸಾಮಗ್ರಿಗಳನ್ನು ತೆಗೆದುಕೊಂಡು ಸುರಕ್ಷಿತ ತಾಣಕ್ಕೆ ತೆರಳಬೇಕೆಂದು ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಮತಕ್ಷೇತ್ರದ ಜನತೆಗೆ ಮನವಿ ಮಾಡಿದ್ದಾರೆ.

ಸ್ಥಳ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆಯಲ್ಲಿರಲು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.‌

ಸುರಕ್ಷಿತ ತಾಣಕ್ಕೆ ತೆರಳುವ ಗ್ರಾಮಸ್ಥರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಅದಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!