ಎಸ್.ಆರ್.ರಾಜಗೋಪಾಲ್ ಸಾವು ಕಾಂಗ್ರೆಸ್ ಗೆ ತುಂಬಲಾರದ ನಷ್ಟ: ಕೆ.ಎನ್. ರಾಜಣ್ಣ

ಮಧುಗಿರಿ: ಮಾಜಿ ಶಾಸಕ, ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್. ರಾಜಣ್ಣ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ರಾಜಗೋಪಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಕೆ.ಎನ್. ರಾಜಣ್ಣ ಅವರು ರಾಜಗೋಪಾಲ್ ಅವರು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಂತರ ಸುಮಾರು ಎರಡು ದಶಕಗಳ ಕಾಲ ಕಾಂಗ್ರೆಸ್ಸಿನ ತಾಲ್ಲೂಕು ಬ್ಲಾಕ್ ಅಧ್ಯಕ್ಷರಾಗಿ ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದರು. ಇವರ ಸಾವು ವೈಯಕ್ತಿಕವಾಗಿ ತನಗೂ ತಾಲ್ಲೂಕಿನ ಕಾಂಗ್ರೆಸ್ ಘಟಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷರಾದ ಎನ್. ಗಂಗಣ್ಣ ಕಾಂಗ್ರೆಸ್ ಮುಖಂಡರಾದ ಉಮೇಶ್, ಆನಂದ್, ಕೃಷ್ಣ, ಈರಣ್ಣ ಇದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!