ತುಮಕೂರು ಜೆಡಿಸ್ ಮುಖಂಡ ಕಾಂಗ್ರೆಸ್ ಪಕ್ಷ ಸೇರ್ತಾರ .?

ತುಮಕೂರು : ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಕಟ್ಟಾಳು, ಮಾಜಿ ಶಾಸಕ ಹೆಚ್ ನಿಂಗಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೆಡಿಎಸ್ ಮುಖಂಡರ ತಾತ್ಸಾರದಿಂದಾಗಿ ಪಕ್ಷದಿಂದ ದೂರ ಉಳಿದಿದ್ದ ನಿಂಗಪ್ಪ ಅವರು, ಈ ಬಾರಿ ಶತಾಯಗತಾಯ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ದೆ ಮಾಡಿ ಗೆಲ್ಲಬೇಕು ಎಂದು ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಕೂಡ ಅವರನ್ನು ಭೇಟಿ ಮಾಡಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಕೂಡ ಮಾಡಿದ್ದರು.

ಇದೆಲ್ಲದರ ನಡುವೆ ಇಂದು ತುಮಕೂರು ನಗರದ ಕ್ಯಾತ್ಸಂದ್ರದಲ್ಲಿರುವ ಕೆ ಎನ್ ರಾಜಣ್ಣ ಅವರ ಮನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಹೆಚ್ ನಿಂಗಪ್ಪ ಅವರು ಕೂಡ ಅವರ ಜೊತೆಯಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಸೆಪ್ಟಂಬರ್ 30 ರಿಂದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ನಡೆಸಲಿದ್ದು, ಈ ವೇಳೆ ನಿಗಪ್ಪನವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ, ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆಗೆ ಇಳಿಯುತ್ತಾರೆ ಎನ್ನುವ ಸುದ್ಧಿಗಳು ಹರಿದಾಡುತ್ತಿದೆ. ಇದಕ್ಕೆ ಅವರೆ ಉತ್ತರ ನೀಡಬೇಕಿದೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!