ಮಧುಗಿರಿ : ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಹಿಂಬದಿ ಸವಾರ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರೆಗಳಪಾಳ್ಯ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಾಟಗೊಂಡನಹಳ್ಳಿಯ ನಿವಾಸಿ ಕದರಮ್ಮ (55) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮಗ ಮತ್ತು ತಾಯಿ ದ್ವಿಚಕ್ರ ವಾಹನದಲ್ಲಿ ಗ್ರಾಮದಿಂದ ಕೊರಟಗೆರೆಗೆ ತೆರಳುತ್ತಿದ್ದಾಗ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.