ಗುಬ್ಬಿ: ತಾಲ್ಲೂಕಿನ ಬೆಲವತ್ತ ಗ್ರಾಮ ಪಂಚಾಯತಿ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪುರ ಗ್ರಾಮದ ಪಿ.ಆರ್.ನವೀನ್ ಅವರನ್ನು ಗುಬ್ಬಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ನಿಟ್ಟೂರು ಹೋಬಳಿ ಪುರ ಗ್ರಾಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಈ ಆಯ್ಕೆ ನಡೆಸಲಾಯಿತು.
ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ. ನನ್ನ ಆಯ್ಕೆಯನ್ನು ಸಮರ್ಥವಾಗಿ ನಿಭಾಯಿಸಲು ಪ್ರಾಮಾಣಿಕ ಮಾಡಿ ಬೆಲವತ್ತ ಪಂಚಾಯತಿಯಲ್ಲಿ ಯುವಕರನ್ನು ಒಗ್ಗೂಡಿಸಿ ಕಾಂಗ್ರೆಸ್ ನತ್ತ ಸೆಳೆಯುವುದಾಗಿ ಪಿ.ಆರ್.ನವೀನ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಶಂಕರಾನಂದ, ಗುಬ್ಬಿ ಬ್ಲಾಕ್ ಅಧ್ಯಕ್ಷ ಎಸ್.ಎಲ್.ನರಸಿಂಹಯ್ಯ, ಮುಖಂಡರಾದ ಹೊನ್ನಗಿರಿಗೌಡ, ಜಿ.ಎಸ್.ಪ್ರಸನ್ನಕುಮಾರ್, ಪಿ.ಎಂ.ಸುರೇಶ್, ಸಲೀಂ ಪಾಷ ಇತರರು ಇದ್ದರು.
ವರದಿ: ರಮೇಶ್ ಗೌಡ, ಗುಬ್ಬಿ.