ಕೆಪಿಸಿಸಿ ಕಾರ್ಯದರ್ಶಿ ಮುರುಳೀಧರ್ ಹಾಲಪ್ಪ ಅವರ ಹುಟ್ಟುಹಬ್ಬ ಹಿನ್ನಲೆ ಹಾಲು ಹಣ್ಣು ಬ್ರೆಡ್ ವಿತರಣೆ

ಗುಬ್ಬಿ: ಕೆಪಿಸಿಸಿ ಕಾರ್ಯದರ್ಶಿ ಮುರಳೀಧರ್ ಹಾಲಪ್ಪ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸೇವಾದಳ ಪದಾಧಿಕಾರಿಗಳು ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಿದರು.

ಆಸ್ಪತ್ರೆಯ ಒಳ ಮತ್ತು ಹೊರ ರೋಗಿಗಳಿಗೆ ಹಾಲು ಹಣ್ಣು ವಿತರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಕಿರಣ್, ಸದಾ ಚಟುವಟಿಕೆಯಿಂದ ಕೂಡಿದ ಕೆಪಿಸಿಸಿ ಕಾರ್ಯದರ್ಶಿ ಮುರಳೀಧರ್ ಹಾಲಪ್ಪ ಪಕ್ಷ ಸಂಘಟನೆಯಲ್ಲಿ ಎತ್ತಿದ ಕೈ ಎನಿಸಿಕೊಂಡಿದ್ದಾರೆ. ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ತನ್ನದೇ ಕೊಡುಗೆ ನೀಡಿದ ಅವರು ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅನೇಕ ಯುವಕರ ಬದುಕು ಕಟ್ಟಿಕೊಟ್ಟಿದ್ದಾರೆ. ಇಂತಹ ಮುಖಂಡರ ಹುಟ್ಟುಹಬ್ಬ ಆಚರಣೆ ಸೇವಾ ಕಾರ್ಯ ಮೂಲಕ ಆಚರಿಸಿದ್ದೇವೆ ಎಂದರು.

ಸೇವಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ಕಡಬ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಪ್ರೋತ್ಸಾಹ ತುಂಬುವ ಜೊತೆಗೆ ಬಡ ಜನರ ದೀನ ದಲಿತರ ಬಗ್ಗೆ ಸದಾ ಚಿಂತನೆ ಮಾಡುವವರು. ಸರಳ ಸಜ್ಜನಿಕೆ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆ ಚತುರ ಎಂದೆನಿಸಿದ ಮುರುಳೀಧರ ಹಾಲಪ್ಪ ಅವರಿಗೆ ಮತ್ತಷ್ಟು ಸೇವೆಗೆ ಶಕ್ತಿ ಸಿಗಲಿ ಎಂದು ಶುಭ ಹಾರೈಸಿದರು.

ಗುಬ್ಬಿ ಬ್ಲಾಕ್ ಅಧ್ಯಕ್ಷ ಎಸ್.ಎಲ್.ನರಸಿಂಹಯ್ಯ ಮಾತನಾಡಿ ಹಾಲಪ್ಪ ಅವರು ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಸಂಘಟನೆಯಲ್ಲಿ ಸಹ ಮುಂಚೂಣಿಯಲ್ಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಸಂಘಟನೆ ಬಲಗೊಳ್ಳಲಿದೆ. ಇಂತಹ ವ್ಯಕ್ತಿತ್ವದ ಅವರ ಹುಟ್ಟುಹಬ್ಬ ಅದ್ದೂರಿತನ ಇಲ್ಲದೆ ಸೇವಾ ಕಾರ್ಯ ಮೂಲಕ ಮಾಡಿರುವುದು ಮುಚ್ಚುವಂತದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಯೋಗೀಶ್, ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಕೋಟೆ ಬಸವರಾಜ್, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಣ್ಣ ತಾಯಮ್ಮ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಜಿ.ಎಂ.ಶಿವಾನಂದ್, ಪ್ರಚಾರ ಸಮಿತಿ ಅಧ್ಯಕ್ಷ ಸಲೀಂಪಾಷ, ಮಹದೇವಯ್ಯ ಇತರರು ಇದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!