13 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಡಿ.ಸಿ ಗೌರಿಶಂಕರ್ ಚಾಲನೆ

ತುಮಕೂರು : ಗ್ರಾಮಾಂತರ ಕ್ಷೇತ್ರದ ಸುಮಾರು 20 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ, ಬಹು ವರ್ಷಗಳ ಬೇಡಿಕೆಯಾಗಿದ್ದ
ಬಸವಣ್ಣನ ಗುಡಿ ಸರ್ಕಲ್ ನಿಂದ ಕೌತ ಮಾರನಹಳ್ಳಿ, ದಿಣ್ಣೆ ಪಾಳ್ಯ, ಕೊಟ್ಟಿಗೆ ಗೊಲ್ಲಹಳ್ಳಿ, ದೊಡ್ಡೆ ಗೌಡನಪಾಳ್ಯ, ಶ್ರೀ ಆದಿಶಕ್ತಿ ಕೆಂಪಮ್ಮನ ದೇವಾಲಯ, ಗುಣಿಗೊಲ್ಲಹಳ್ಳಿ, ಐನಾಪೂರ, ನೇರಳಾಪುರ ಗ್ರಾಮದ ಮೂಲಕ ಹಾದು ಹೋಗಿ ಸಾಸಲು ಗ್ರಾಮ ಸಂಪರ್ಕಿಸುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಡಿ.ಸಿ ಗೌರಿಶಂಕರ್ ರವರು ಇಂದು ಚಾಲನೆ ನೀಡಿದರು.

ನಂತರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸಿದರು.
ಈ ರಸ್ತೆ ಅಭಿವೃದ್ಧಿಯಿಂದಾಗಿ ಸಾವಿರಾರು ರೈತರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರುಗಳಿಗೆ ಅನುಕೂಲವಾಗಿದ್ದು, ಇದೆ ಸಂದರ್ಭದಲ್ಲಿ ಗ್ರಾಮಸ್ಥರುಗಳು ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಗೂಳೂರು ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಪಾಲನೇತ್ರಯ್ಯ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋವಿಂದರಾಜು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪವಿತ್ರ ಶಿವಪ್ರಸಾದ್, ಲೋಕೇಶ್, ಹೇಮಂತ್, ವೆಂಕಟೇಶ್, ಮುಖಂಡರುಗಳಾದ ನಾಗರಾಜು, ಬಸವರಾಜು, ಶಿವಣ್ಣ, ನಾಗಣ್ಣ, ರವಿ ಕಿರಣ್, ಕುಶಾಲ್, ಗೋಪಾಲ್, ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!