ಕೊರಟಗೆರೆ :- ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂಬರ್ 31ರಲ್ಲಿ ಅರೆ ಅಲೆಮಾರಿ ಜನಾಂಗದವರಿಗೆ ನಿವೇಶನ ವಿಂಗಡಣೆ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳಾದ ಬಾಲಕೃಷ್ಣ ತಿಳಿಸಿ ಮಾತನಾಡಿದ ಅವರು ..
ಅರೆ ಅಲೆಮಾರಿ ಜನಾಂಗದವರಿಗೆ ಸರ್ಕಾರದ ಆದೇಶದಂತೆ ಮೀಸಲಿರಿಸಿದ್ದ ಜಾಗದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ನಿವೇಶನ ವಿಂಗಡಣೆ ಕಾರ್ಯ ಪ್ರಾರಂಭಿಸಲಾಗಿದೆ ನೈಜ ಚಿತ್ರವನ್ನು ಕಾಮಗಾರಿಯನ್ನು ಪೂರ್ಣಗೊಳಿಸಿ ಅರೆ ಅಲೆಮಾರಿ ಜನಾಂಗದವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು ..
ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉಪವಿಭಾಗ ಅಧಿಕಾರಿ ರವಿಕುಮಾರ್ ಮಾತನಾಡಿ …
ಕಂದಾಯ ಇಲಾಖೆ ಹಾಗೂ ಭೂಮಾಪನಾ ಇಲಾಖೆ ನಿಗದಿಪಡಿಸಿರುವ ಜಾಗದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಸಜ್ಜಿತವಾದ ನಿವೇಶನ ರಸ್ತೆ ಸಂಪರ್ಕ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಅರೆ ಅಲೆಮಾರಿ ಜನಾಂಗದವರಿಗೆ ನೀಡಲಾಗುವುದು ಎಂದು ತಿಳಿಸಿದರು ..
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಲ್ಲಣ್ಣ ಹಾಗೂ ಸದಸ್ಯರುಗಳು ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮ ಲೆಕ್ಕಿಗರು ಹಾಗೂ ಸಾರ್ವಜನಿಕರು ಹಾಜರಿದ್ದರು …