ಗ್ರಾಮೀಣಾಭಿವೃದ್ದಿಯಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ : ಜಿಪಂ ಯೋಜನಾ ನಿರ್ದೇಶಕ ನರಸಿಂಹಮೂರ್ತಿ

ಗುಬ್ಬಿ: ಉತ್ತಮ ಪರಿಸರ ಮೂಲಕ ಆರೋಗ್ಯ ಕಾಪಾಡಲು ಶುಚಿತ್ವ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿದರೆ ಗ್ರಾಮೀಣಾಭಿವೃದ್ದಿ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ತಿಳಿಸಿದರು.

ತಾಲ್ಲೂಕಿನ ಅಮ್ಮನಘಟ್ಟ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಸಿ ನೆಟ್ಟು ಸ್ವಚ್ಚತಾ ಹಿ ಸೇವಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು ಹಳ್ಳಿಗಾಡ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಸಿಬ್ಬಂದಿ ಜೊತೆ ಸ್ವಚ್ಚತೆ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಉತ್ತಮ ಪರಿಸರ ಸೃಷ್ಠಿಗೆ ಮೊದಲು ಜನರಲ್ಲಿ ಅರಿವು ಮೂಡಬೇಕು. ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡದಂತೆ ಕ್ರಮ ವಹಿಸಬೇಕು. ಆರೋಗ್ಯ ಗ್ರಾಮ ದೇಶದ ಬೆನ್ನೆಲುಬು ಎಂಬ ಅಂಶ ಹೇಳಿದ ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಅಧಿಕಾರಿಗಳು ಶಪಥ ಮಾಡಬೇಕು ಎಂದು ಕರೆ ನೀಡಿದ ಅವರು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ನರೇಗಾ ಯೋಜನೆ ಕೊಟ್ಟಿದೆ. ಅಲ್ಲಿನ ಅನುದಾನ ಬಳಸಿಕೊಂಡು ಕೆಲಸ ಮಾಡಿ ನಿತ್ಯ ಕೂಲಿ ಜೊತೆ ಗ್ರಾಮದ ಅಭಿವೃದ್ಧಿಗೆ ಶ್ರಮದಾನ ಮಾಡಲು ಸೂಚನೆ ನೀಡಿದರು.

ತಾಪಂ ಇಓ ಶಿವಪ್ರಕಾಶ್ ಮಾತನಾಡಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಕಾರ್ಯ ಮಾಡಿ ಜನರ ಸಮಸ್ಯೆ ಆಲಿಸಲು ವಿಶೇಷ ಗ್ರಾಮ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಪ್ರತಿಜ್ಞಾ ವಿಧಿ ಪಡೆದಂತೆ ನಡೆದುಕೊಂಡು ಗ್ರಾಮಗಳ ನೈರ್ಮಲ್ಯ ತೆಗೆದು ಶುಚಿತ್ವ ಕಾಪಾಡುವ ಕೆಲಸ ನಿರಂತರ ನಡೆಯಲು ಎಲ್ಲಾ ಪಿಡಿಓಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಮಹದೇವಯ್ಯ, ಉಪಾಧ್ಯಕ್ಷೆ ದಿನೇಶ್, ಸದಸ್ಯ ರಮೇಶ್, ಪಿಡಿಓ ರಾಜಣ್ಣ ಇತರರು ಇದ್ದರು.
ವರದಿ: ಜಿ.ಆರ್.ರಮೇಶ್ ಗೌಡ, ಗುಬ್ಬಿ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!