ಕೊರಟಗೆರೆ :- ಪಟ್ಟಣದ ಜಿಲ್ಲಾ ಪಂಚಾಯತ್ ತುಮಕೂರು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವಿಕುಮಾರ್ ತಮ್ಮ ಇಲಾಖೆಯ ಸಿಬ್ಬಂದಿಯೊಂದಿಗೆ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿದರು ..
ನಂತರ ಮಾತನಾಡಿದ ಅವರು ಸ್ವಚ್ಛತಾ ಹೀ ಸೇವಾ ಅಡಿಯಲ್ಲಿ ನಮ್ಮ ಕಚೇರಿ ನಮ್ಮ ಜವಾಬ್ದಾರಿ ಎನ್ನುವ ನೂತನ ಕಾರ್ಯಕ್ರಮದ ಅಡಿಯಲ್ಲಿ
ಸುತ್ತಮುತ್ತಲಿನ ಆವರಣವನ್ನು ಸ್ವಚ್ಛತೆಯಿಂದ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ
ಶಾಂತಿ ಶಿಸ್ತು ಸಂಯಮ ಸ್ವಚ್ಛತೆ ಎನ್ನುವುದು ಮಹಾತ್ಮಗಾಂಧೀಜಿಯವರ ಕನಸಾಗಿತ್ತು ಇದೆಲ್ಲವನ್ನು ನಮ್ಮ ಜೀವನದ ಶೈಲಿಯಲ್ಲಿ ತೊಡಗಿಸಿಕೊಳ್ಳಬೇಕು ಆಗಲೇ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿದಂತಾಗುವುದು ಆದ್ದರಿಂದ ಎಲ್ಲರೂ ಸ್ವಚ್ಚತಾ ಹೀ ಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಚತೆಯಿಂದ ಕಾಪಾಡಿಕೊಂಡು ಎಲ್ಲರೂ ಆರೋಗ್ಯವಂತರಾಗಿ ಎಂದು ತಿಳಿಸಿದರು ..
ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಲಾಖೆಯ ಎಲ್ಲ ಸಿಬ್ಬಂದಿಯವರು ಗುತ್ತಿಗೆದಾರರು ಹಾಜರಿದ್ದರು ..
ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ