ವಿಜಯದಶಮಿಯ ಸಕಲ ಸಂಪ್ರದಾಯದ ಸಕಲ ವಿಧಾನಗಳೊಂದಿಗೆ ಬನ್ನಿಮಂಟಪಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ್

ಕೊರಟಗೆರೆ :- ಪಟ್ಟಣದ ತಾಲ್ಲೂಕು ಕಚೇರಿ ಆವರಣದಿಂದ ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಾಂಪ್ರದಾಯಿಕವಾಗಿ ಸಕಲ ಸಿದ್ಧತೆಗಳೊಂದಿಗೆ ವಾದ್ಯಗೋಷ್ಠಿ ಜತೆಗೆ ಕಾಲ್ನಡಿಗೆಯಲ್ಲಿ ಬಂದು ಆಂಜನೇಯಸ್ವಾಮಿ ಸನ್ನಿಧಾನದಲ್ಲಿ ನಿರ್ಮಿಸಿದ ಬನ್ನಿಮಂಟಪಕ್ಕೆ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಪೂಜೆ ಸಲ್ಲಿಸಿ ಬನ್ನಿ ಮಂಟಪವನ್ನು ಕತ್ತರಿಸುವ ಮೂಲಕ ವಿಜಯ ದಶಮಿ ಹಬ್ಬವನ್ನು ಗ್ರೇಡ್ ೨ತಹಶೀಲ್ದಾರ್ ಅವರು ಭಕ್ತರು ಹಾಗೂ ಸಾರ್ವಜನಿಕರೊಂದಿಗೆ ಹಂಚಿಕೊಂಡರು .

ಗ್ರೇಡ್ ೨:ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ :-

ಪ್ರತಿವರ್ಷದಂತೆ ಈ ವರ್ಷವೂ ಕೂಡ ಇಲ್ಲಿನ ಸಂಪ್ರದಾಯದಂತೆ ವಿಜಯ ದಶಮಿ ಹಬ್ಬವನ್ನು ಬನ್ನಿಮಂಟಪ ಕಡಿಯುವ ಮುಖೇನ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಸಡಗರ ಸಂಭ್ರಮದಿಂದ ಆಚರಿಸಿದ್ದೇವೆ ಎಂದು ತಿಳಿಸಿದರು ..

ಪಟ್ಟಣ ಪಂಚಾಯಿತಿ ಸದಸ್ಯ ಪುಟ್ಟನರಸಪ್ಪ ಮಾತನಾಡಿ :-

ಪೂರ್ವಿಕರ ಕಾಲದಿಂದಲೂ ಶ್ರೀ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ದಸರಾ ಹಾಗೂ ಶ್ರೀ ವಿಜಯದಶಮಿ ಹಬ್ಬದ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಕೂಡ ಬನ್ನಿ ಮಂಟಪ ನಿರ್ಮಿಸಿ ಪೂಜೆ ಸಲ್ಲಿಸಿ ನಂತರ ಶ್ರೀ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸುವ ಮುಖೇನ ವಿಜಯ ದಶಮಿ ಹಬ್ಬವನ್ನು ಆಚರಿಸಲಾಗುತ್ತದೆ ಆದಷ್ಟು ಬೇಗ ಪಟ್ಟಣ ಪಂಚಾಯ್ತಿ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಕಾಂಪೌಂಡ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು …

ಇದೇ ಸಂದರ್ಭದಲ್ಲಿ ಗ್ರಾಮದ ಗೌಡರು ಸೇರಿದಂತೆ ತಾಲ್ಲೂಕು ಪಂಚಾಯ್ತಿ ಅಧಿಕಾರಿ ವರ್ಗದವರು, ಪಟ್ಟಣ ಪಂಚಾಯ್ತಿ ಅಧಿಕಾರಿ ವರ್ಗದವರು ಹಾಗೂ ಸಹಸ್ರಾರು ಭಕ್ತಾದಿಗಳು ಹಾಜರಿದ್ದರು ..

ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!